ಹಿರಿಯಡ್ಕ: ಮಟ್ಕಾ ಜುಗಾರಿಗೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿ ವಶಕ್ಕೆ

ಹಿರಿಯಡ್ಕ ಸೆ.14(ಉಡುಪಿ ಟೈಮ್ಸ್ ವರದಿ): ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕ ರಿಂದ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯೋರ್ವನನ್ನು ಹಿರಿಯಡ್ಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಸು ಶೇರಿಗಾರ ಪೊಲೀಸರು ವಶಕ್ಕೆ ಪಡೆದುಕೊಂಡ ಆರೋಪಿ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಿಯಡ್ಕ ಪೊಲೀಸರು ನಿನ್ನೆ ಬೊಮ್ಮರಬೆಟ್ಟು ಗ್ರಾಮದ ಹಳೆ ಸಂತೆ ಮಾರ್ಕೆಟ್ ಬಳಿ ತೆರಳಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕ ರಿಂದ ಹಣ ಸಂಗ್ರಹಿಸುತ್ತಿದ್ದ ವಾಸು ಶೇರಿಗಾರ ಎಂಬಾತನನ್ನು ವಶಕ್ಕೆ ಪಡೆದು ಆತನಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ 1,150 ರೂ. ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!