ಕೋಟ: ಪೊಲೀಸ್ ಕಾನ್ಸ್ಟೇಬಲ್ ಮತ್ತು ಅಗ್ನಿಪಥ್ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರ
ಉಡುಪಿ ಸೆ.15(ಉಡುಪಿ ಟೈಮ್ಸ್ ವರದಿ): ಕೋಟದ ವಿ-ಶೈನ್ ಕೋಚಿಂಗ್ ಸೆಂಟರ್ ನ ಆಶ್ರಯದಲ್ಲಿ 4,000 ಪೊಲೀಸ್ ಕಾನ್ಸ್ಟೇಬಲ್ ಮತ್ತು ಅಗ್ನಿಪಥ್ ಕಾರ್ಯಕ್ರಮದ ಅಗ್ನಿವೀರರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರ ಅ.2 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಕೋಟದ ವಿವೇಕ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.
ಕಾರ್ಯಗಾರವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹರೀಶ್ ಶೆಟ್ಟಿ- 9980040551, ಗಿರೀಶ್ ಶೆಟ್ಟಿ – 7619310724, ವಿವೇಕ್ ಅಮೀನ್- 9008649069 ನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.