ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆ ಅವಧಿ ಒಂದು ವರ್ಷ ವಿಸ್ತರಣೆ
ಬೆಂಗಳೂರು, ಸೆ.16: ಅಕ್ರಮ- ಸಕ್ರಮ ಅರ್ಜಿ ಸಲ್ಲಿಕೆ ಅವಧಿಯನ್ನು ರಾಜ್ಯ ಸರಕಾರವು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಿದೆ.
94 ಎ ತಿದ್ದುಪಡಿ ಮೂಲಕ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿ ಸರಕಾರಿ ಭೂಮಿಯಲ್ಲಿ ನಡೆಸುತ್ತಿದ್ದ ಅಕ್ರಮ ಸಾಗುವಾಳಿಯನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಅವಕಾಶವಿತ್ತು. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರಕಾರ ನಿರ್ಧರಿಸಿದೆ. ಹಾಗೂ ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಕಂದಾಯ ಇಲಾಖೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಇನ್ನು ಯಾವುದೇ ಒಬ್ಬ ವ್ಯಕ್ತಿ ತನ್ನ ಸ್ವಾಧೀನಕ್ಕೆ ಒಳಪಟ್ಟ ಭೂಮಿಯನ್ನು ಸಕ್ರಮಗೊಳಿಸಿ ಕೊಳ್ಳುವುದಕ್ಕೆ ಗೊತ್ತುಪಡಿಸಿದ ಅರ್ಹತೆ ಹೊಂದಿದ್ದರೆ ಕಾಯಿದೆ ಜಾರಿಗೆ ಬಂದ ದಿನದಿಂದ ಒಂದು ವರ್ಷದ ಅವಧಿಯಲ್ಲಿ ನಿಯಮ 67 ರ ಅನ್ವಯ ಸೂಕ್ತ ಶುಲ್ಕದೊಂದಿಗೆ ಅರ್ಜಿ ಸಲ್ಲಸಬೇಕಾಗುತ್ತದೆ ಎಂದು ತಿಳಿದು ಬಂದಿದೆ.