ಉಡುಪಿ: ಸೆ.22 ರಂದು ಮಿನಿ ಉದ್ಯೋಗ ಮೇಳ

ಉಡುಪಿ, ಸೆ.17: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 22 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!