ಉಡುಪಿ: ಮನೆಯ ಎದುರು ನಿಲ್ಲಿಸಿದ್ದ ಬೈಕ್ ಕಳ್ಳತನ
ಉಡುಪಿ ಸೆ.17(ಉಡುಪಿ ಟೈಮ್ಸ್ ವರದಿ): ಪುತ್ತೂರು ಗ್ರಾಮದ ನಿಟ್ಟೂರಿನ ಬಳಿ ಮನೆಯ ಎದುರು ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೋಹನ್ ಶೆಟ್ಟಿ ಎಂಬವರಿಗೆ ಸೇರಿದ ಬೈಕ್ ಕಳ್ಳತನವಾಗಿದ್ದು, ಮನೆಯ ಅಂಗಳದಲ್ಲಿ ಬೀಗ ಹಾಕಿ ನಿಲ್ಲಿಸಿದ್ದ 1.50 ಲಕ್ಷ ರೂ ಮೌಲ್ಯ ಬೈಕ್ ನ್ನು ಸೆ.14 ರಂದು ರಾತ್ರಿ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.