ಉಡುಪಿ: ಅ.1ರಿಂದ ಆಟೋ ರಿಕ್ಷಾ ಪ್ರಯಾಣ ದರ ಏರಿಕೆ

ಉಡುಪಿ ಸೆ.19 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿ ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರ ಆದೇಶವನ್ನು ಹೊರಡಿಸಿದೆ.

ಈ ಬಗ್ಗೆ ಉಡುಪಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ ಪಿ ಅವರು ಆದೇಶ ಹೊರಡಿಸಿದ್ದು, ಈ ನೂತನ ದರ ಪರಿಷ್ಕರಣೆಯು ಅ.1 ರಿಂದ ಜಾರಿಗೆ ಬರಲಿದ್ದು, ಅದರಂತೆ 1.5 ಕಿ.ಮೀಟರ್ ವರೆಗೆ ಕನಿಷ್ಟ 40 ರೂ. ಆ ನಂತರದ ಪ್ರತಿ ಕಿ.ಮೀಟರ್‍ಗೆ 20 ರೂ ಏರಿಸಿ ದರವನ್ನು ಪರಿಷ್ಕರಿಸಲಾಗಿದೆ. ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಟೋರಿಕ್ಷಾ ಚಾಲಕ/ಮಾಲಕರು ತಮ್ಮ ಅಟೋರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫ್ಲಾಗ್ ಮೀಟರ್ ನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇದರ ಜೊತೆಗೆ ಸೂಚಿಸಿದ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಅ.31 ರ ಒಳಗೆ ಕಡ್ಡಾಯವಾಗಿ ರಿಕ್ಯಾಲೀಬರೇಷನ್ ಹಾಗೂ ಸೀಲ್ ಮಾಡಿಸಿ ಕೊಳ್ಳತಕ್ಕದ್ದು. ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!