ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ವಿಧಾನಸಭೆ ಅಧಿವೇಶನ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿಯಾದರು.
ಸಿದ್ದರಾಮಯ್ಯ ಅವರ ಜೊತೆ ಕಾಂಗ್ರೆಸ್ ಮುಖಂಡರಾದ ಆರ್.ವಿ ದೇಶಪಾಂಡೆ, ಜಮೀರ್ ಅಹಮ್ಮದ್, ಅಶೋಕ್ ಪಟ್ಟಣ ಕೂಡ ಜೊತೆಗಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದ್ದಾರೆ.
ಆರು ವರ್ಷಗಳ ನಂತರ ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ.