ಬೈಂದೂರು: ಹೋಟೆಲ್ ಉದ್ಯಮಿ ನೇಣಿಗೆ ಶರಣು
ಬೈಂದೂರು ಸೆ.19 (ಉಡುಪಿ ಟೈಮ್ಸ್ ವರದಿ): ಕಾಲ್ತೋಡು ಗ್ರಾಮದ ಹಾಡಿಯಲ್ಲಿ ಹೋಟೆಲ್ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ರಾಘವೇಂದ್ರ ಶೆಟ್ಟಿ (37) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸೆ.18 ರಂದು ಬೆಳಿಗ್ಗೆ ಮನೆಯಿಂದ ಹೊಟೇಲ್ ಗೆ ಹೊರಡುವಾಗ ತಾನು ರಾತ್ರಿ ಹೋಟೆಲ್ ನಲ್ಲಿಯೇ ಉಳಿದುಕೊಳ್ಳುವುದಾಗಿ ಹೇಳಿ ಹೋಗಿದ್ದರು. ಆದರೆ ಇಂದು ಬೆಳಿಗ್ಗೆ ಅವರ ಮೃತದೇಹವು ಕಾಲ್ತೋಡು ಗ್ರಾಮದ ಕೋಳಿಫಾರ್ಮವೊಂದರ ಹತ್ತಿರದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಮೃತರ ತಮ್ಮ ನಿತಿನ್ ಶೆಟ್ಟಿ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.