ವಾರಾಹಿ ಮಾಣಿ ಜಲಾಶಯ ನೀರಿನ ಮಟ್ಟ ಏರಿಕೆ- ನದಿ ಪಾತ್ರದ ಜನರಿಗೆ ಎಚ್ಚರಿಕೆ
ಉಡುಪಿ, ಸೆ 21: ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ. ತಲುಪಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದಲ್ಲಿ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.
ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.