ಹೆಬ್ರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ- ಮುದ್ರಾಡಿಯ ಯುವಕ ಸೆರೆ

ಹೆಬ್ರಿ ಸೆ.21: ಸಂಬಂಧಿಕನೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ.

ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಬಚ್ಚಪ್ಪು ನಿವಾಸಿ ಗಣೇಶ್ ಶೆಟ್ಟಿಗಾರ್ (23) ಎಂಬಾತ ಬಂಧಿತ ಆರೋಪಿ.

ಜು 30 ರಂದು ಆತನ ಮನೆಗೆ ಹೋಗಿದ್ದ ತನ್ನ ದೂರದ ಸಂಬಂಧಿಯಾಗಿರುವ 16ರ ಹರೆಯದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ಈ ಬಗ್ಗೆ ಬಾಲಕಿಯ ಪೋಷಕರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!