ಶಾಲಾ ಕಾಲೇಜಿನಲ್ಲಿ ಹಿಜಾಬ್ ನಿಷೇಧ- ತೀರ್ಪು ಕಾಯ್ದಿರಿಸಿದ ಸುಪ್ರೀಂ
ಹೊಸದಿಲ್ಲಿ ಸೆ.22: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ಅಂತ್ಯಗೊಂಡಿದೆ.
ಸುಪ್ರೀಂಕೋರ್ಟ್ ನಲ್ಲಿ 10 ದಿನಗಳ ಕಾಲ ಮೇಲ್ಮನವಿ ಅರ್ಜಿಗಳ ವಾದ-ಪ್ರತಿವಾದ ಆಲಿಸಿದ ದ್ವಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ ಎಂದು ತಿಳಿದು ಬಂದಿದೆ.