ಉಡುಪಿ ನಗರದಲ್ಲೂ ಪಿಎಫ್ಐನಿಂದ ದೀಡಿರ್ ಪ್ರತಿಭಟನೆ- ಲಘು ಲಾಠಿ ಪ್ರಹಾರ

ಉಡುಪಿ ಸೆ.22 : ಪಿ.ಎಫ್.ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ನಡೆದಿರುವ ಎನ್.ಐ.ಎ ದಾಳಿ ಖಂಡಿಸಿ  ಪಿ.ಎಫ್.ಐ ಕಾರ್ಯಕರ್ತರು ಇಂದು ಉಡುಪಿ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕೋರ್ಟ್‌ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು “ಎನ್.ಐ.ಎ ಗೋ ಬ್ಯಾಕ್” ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಿಎಫ್.ಐ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಇಂದು ಬೆಳಿಗ್ಗೆ ಮಂಗಳೂರು ಸೇರಿದಂತೆ ಹಲವೆಡೆ ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಕಚೇರಿಗಳ ಮೇಲೆ ಎನ್.ಐ.ಎ ದಾಳಿ ನಡೆಸಿತ್ತು. ಈ ಹಿನ್ನಲೆಯಲ್ಲಿ ಪಿ.ಎಫ್.ಐ ಕಾರ್ಯಕರ್ತರು ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!