ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜ್ ಆರಂಭವಿಲ್ಲ- ಡಾಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು ಸೆ.23: ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್‍ನ ಲಿಂಗೇಶ್ ಕೆ.ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಅವರು, `ಈಗ ರಾಜ್ಯದಲ್ಲಿ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ. ಅಲ್ಲಿ 3,670 ಸೀಟುಗಳಿದ್ದು, 2,086 ಮಾತ್ರ ಭರ್ತಿಯಾಗಿವೆ. 1,584 ಸೀಟುಗಳು ಭರ್ತಿಯಾಗದೆ ಉಳಿದಿವೆ. ಈ ಕಾರಣದಿಂದ ಹೊಸ ಎಂಜಿನಿಯರಿಂಗ್ ಕಾಲೇಜು ಆರಂಭಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!