ರಾಜ್ಯದ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ವ್ಯತ್ಯಯಕ್ಕೆ ಬಿಆರ್ ಶೆಟ್ಟಿ ಒಡೆತನದ ಕಂಪನಿ ದಿವಾಳಿಯೇ ಕಾರಣ: ಡಾ.ಕೆ.ಸುಧಾಕರ್

ಬೆಂಗಳೂರು ಸೆ.23: ‘ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯಲ್ಲಿ ವ್ಯತ್ಯಯ ಆಗಿರುವುದಕ್ಕೆ ಉದ್ಯಮಿ ಬಿ.ಆರ್.ಶೆಟ್ಟಿ ಒಡೆತನದ ಕಂಪನಿ ದಿವಾಳಿ ಆಗಿರುವುದು ಕಾರಣ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಂದು ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಕಾಂಗ್ರೆಸ್‍ನ ಶ್ರೀನಿವಾಸ್ ಮಾನೆ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದ ಆಸ್ಪತ್ರೆಗಳಲ್ಲಿನ ಡಯಾಲಿಸಿಸ್ ಘಟಕಗಳ ನಿರ್ವಹಣೆಯನ್ನು ಎರಡು ಕಂಪನಿಗಳಿಗೆ ಗುತ್ತಿಗೆಗೆ ನೀಡಲಾಗಿತ್ತು. ಬಿ.ಆರ್.ಶೆಟ್ಟಿ ಒಡೆತನದ ಕಂಪನಿಗೆ ಗುತ್ತಿಗೆಗೆ ನೀಡಿದ್ದ ಘಟಕಗಳಲ್ಲಿ ಸಮಸ್ಯೆಯಾಗಿದೆ. ಈ ಘಟಕಗಳ ನಿರ್ವಹಣೆಯನ್ನೂ ಎಸ್ಕಾಗ್ ಎಂಬ ಮತ್ತೊಂದು ಕಂಪನಿಗೆ ತಾತ್ಕಾಲಿಕವಾಗಿ ನೀಡಲಾಗಿದೆ’. ಹೊಸ ಗುತ್ತಿಗೆದಾರರ ನೇಮಕಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎರಡು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.”

Leave a Reply

Your email address will not be published. Required fields are marked *

error: Content is protected !!