ಲೈಂಗಿಕ ಕಿರುಕುಳ,ಬ್ಲಾಕ್ ಮೇಲ್ ಮಾಡುತ್ತಿದ್ದ ಹದಿನೈದರ ಬಾಲಕನ ಹತ್ಯೆಗೈದು ನೇಣಿಗೆ ಶರಣಾದ ಯುವಕ

ಭೋಪಾಲ್ ಸೆ.23: ತನಗಿಂತ ಕಿರಿಯ ಬಾಲಕ ತನಗೆ ಲೈಂಗಿಕ ಕಿರುಕಳ ನೀಡುತ್ತಿದ್ದ ಕಾರಣ ಬಾಲಕನನ್ನು ಕೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.

ಹದಿನೈದು ವರ್ಷದ ಬಾಲಕ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಾಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಡೆತ್ ನೋಟ್ ಬರೆದು 20 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಆತ ಆತ್ಮಹತ್ಯೆಗೆ ಶರಣಾಗುವ ಮುನ್ನ ಆತ 15 ವರ್ಷದ ಬಾಲಕನನ್ನು ಕೊಂದಿರುವುದು ಇದೀಗ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ  ಮುಚ್ಚಿದ ಫ್ಯಾಕ್ಟರಿ ಜಾಗದಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗುವ ಮುನ್ನ ಈ ಯುವಕ, ಬಾಲಕನನ್ನು ಕೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೇಕಪ್ ಕಲಾವಿದನಾಗಿದ್ದ ಯುವಕ ಬುಧವಾರ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈತನ ಮನೆಯಲ್ಲಿ ನಾಲ್ಕು ಪುಟಗಳ ಆತ್ಮಹತ್ಯೆ ಟಿಪ್ಪಣಿಯೂ ಸಿಕ್ಕಿತ್ತು. ತನಗಿಂತ ಐದು ವರ್ಷ ಕಿರಿಯ ಬಾಲಕನೊಬ್ಬ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಆತನ ವಿರುದ್ಧ ಸೇಡು ತೀರಿಸಿಕೊಂಡಿದ್ದಾಗಿ ಪತ್ರದಲ್ಲಿ ಬರೆದಿದ್ದ ಹಾಗೂ “ನಾನು ಆಘಾತಕ್ಕೆ ಒಳಗಾಗಿದ್ದೇನೆ. ಆದರೆ ಯಾರೊಂದಿಗೂ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ನನಗಿಂತ ಕಿರಿಯ ಬಾಲಕ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದರೆ ನಂಬುವ ಸ್ಥಿತಿಯಲ್ಲಿಲ್ಲ. ದುಬಾರಿ ಉಡುಗೊರೆಗಳನ್ನು ಆಗ್ರಹಿಸುತ್ತಿದ್ದುದಲ್ಲದೇ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಬೆದರಿಕೆಯನ್ನೂ ಹಾಕಿದ್ದ”. ಸಮಾಜದ ಭಯದಿಂದ ನಾನು ಆತನ ಬೇಡಿಕೆಗಳಿಗೆ ಒಪ್ಪಿಕೊಂಡು ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ದುಬಾರಿ ಸೈಕಲ್ ಕೊಡಿಸಿದ್ದೆ. ಆದರೆ ಈ ಆಘಾತದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ನಾನು ಆತ್ಮಹತ್ಯೆಗೆ ಮುನ್ನ ಸೇಡು ತೀರಿಸಿಕೊಂಡಿದ್ದೇನೆ” ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ ಎಂದು ಮಾಧ್ಯಮ ವರದಿಯಿಂದ ತಿಳಿದು ಬಂದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!