ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣಗೆ ಜಾಮೀನು ಅರ್ಜಿ ತಿರಸ್ಕರ
ಚಿತ್ರದುರ್ಗ/ಶಿವಮೊಗ್ಗ ಸೆ.24: ಲೈಂಗಿಕ ಕಿರುಕುಳದ ಆರೋಪದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ವಾದ ಮಂಡಿಸಿದ್ದ ವಿಶೇಷ ಸರ್ಕಾರಿ ವಕೀಲೆ ಕೆ.ಬಿ.ನಾಗವೇಣಿ ಅವರು, ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ’ ಎಂದು ವಾದಿಸಿದ್ದರು. ವಕೀಲರ ವಾದ ಆಲಿಸಿದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ವಾದವನ್ನು ಪರಿಗಣಿಸಿ ಶರಣರ ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿತ್ತು. ಹೀಗಾಗಿ ಅವರು ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.