ದೇಶದ ಭದ್ರತೆಗೆ ಸವಾಲಾದ ಪಿಎಫ್’ಐ ಬಗ್ಗು ಬಡಿಯಲು ಕ್ರಮ: ಸುನಿಲ್ ಕುಮಾರ್

ಉಡುಪಿ: ದೇಶದ ಆಂತರಿಕ ಭದ್ರತೆಗೆ ಸವಾಲು ಆಗಿರುವ ಪಿಎಫ್ ಐ ಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು. ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ. ಜಗತ್ತಿನ ಯಾವುದೇ ರಾಷ್ಟ್ರವು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಸಾಧ್ಯವಿಲ್ಲ‌ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಹಿಂದೂ ರಾಷ್ಟ್ರ
ಹಿಂದೂ ಸಂಸ್ಕೃತಿಯ ಹಿನ್ನೆಲೆಯಲ್ಲಿ, ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ. ಜನರು ಕೂಡ ಇದಕ್ಕೆ ಬೆಂಬಲವನ್ನ ಕೊಡಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!