ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಪುಷ್ಪಾನಂದ ಫೌಂಡೇಶನ್ ಕಾರ್ಯ ಶ್ಲಾಘನೀಯ- ರೋಹಿತ್ ಹೆಗ್ಡೆ
ಉಡುಪಿ: ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಪುಷ್ಪಾನಂದ ಫೌಂಡೇಶನ್ ವತಿಯಿಂದ ಯಶ್ ಪಾಲ್ ಸುವರ್ಣ ರವರ ಸಮಾಜ ಮುಖಿ ಕಾರ್ಯ ಶ್ಲಾಘನೀಯವಾಗಿದ್ದು ಫೌಂಡೇಶನ್ ಮೂಲಕ ಸಮಾಜಮುಖಿ ಕಾರ್ಯಕ್ರಮಗಳು ನಿರಂತರ ಸಾಗಿ ಬರಲಿ ಎಂದು ಜನಾರ್ದನ ಜನ ಕಲ್ಯಾಣ ಸೇವಾ ಸಮಿತಿಯ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಹೇಳಿದರು.
ಎರ್ಮಾಳ್ ಜನಾರ್ದನ ದೇವಸ್ಥಾನದ ಜನಾರ್ದನ ಜನ ಕಲ್ಯಾಣ ಸಭಾಂಗಣದಲ್ಲಿ ಆಯೋಜಿಸಿದ್ದ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪಡುಬಿದ್ರೆ, ಹೆಜಮಾಡಿ, ಪಲಿಮಾರು, ಎಲ್ಲೂರು, ಬೆಳಪು, ತೆಂಕ ಮತ್ತು ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ 325 ವಿದ್ಯಾರ್ಥಿ ಗಳಿಗೆ ರೂ.3.75 ಲಕ್ಷದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಮಾತನಾಡಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ನೀಡುವ ಪುಷ್ಪಾನಂದ ಫೌಂಡೇಶನ್ ಸಮಾಜಮುಖಿ ಕಾರ್ಯಚಟುವಟಿಕೆ ಇತರರಿಗೂ ಪ್ರೇರಣೆಯಾಗಲಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುಷ್ಪನಂದ ಫೌಂಡೇಶನ್ ಪ್ರವರ್ತಕ ಯಶ್ ಪಾಲ್ ಎ. ಸುವರ್ಣ ಮಾತನಾಡಿ ಫೌಂಡೇಶನ್ ಮೂಲಕ ಕಾಪು ವಿಧಾನ ಸಭಾ ಕ್ಷೇತ್ರದ 26 ಗ್ರಾಮ ಪಂಚಾಯತ್ ಮತ್ತು ಪುರಸಭೆ ವ್ಯಾಪ್ತಿಯ ಸುಮಾರು 1500 ವಿದ್ಯಾರ್ಥಿ ಗಳಿಗೆ ರೂ.15 ಲಕ್ಷ ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಲು ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಉದ್ದೇಶ ಹೊಂದಿದ್ದು, ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿ ಗಳು ಇನ್ನೂ ಉತ್ತಮ ಸಾಧನೆ ಮಾಡಿ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದರು.
ಸಮಾರಂಭದಲ್ಲಿ ಮುಂಬಯಿ ಉತ್ತರ ಬಿಜೆಪಿ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಪ್ರಭು, ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಸ್ತೂರಿ ಪ್ರವೀಣ್, ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕುಂತಳ, ಪಡುಬಿದ್ರೆ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ಉದ್ಯಮಿ ಕಿಶೋರ್ ಶೆಟ್ಟಿ, ಜೇಸಿಐ ಪಡುಬಿದ್ರಿ ಅಧ್ಯಕ್ಷರಾದ ಶರತ್ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಮಟ್ಟು ಯತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.