ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಬೊಮ್ಮಾಯಿ

ಹಾವೇರಿ: ಹಾಸ್ಟೆಲ್‌, ಕಾಲೇಜು ಆವರಣದಲ್ಲಿ ಮಾದಕವಸ್ತು‌ ದೊರೆತರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿ ಅಧಿಕಾರಿಗಳು 200 ಕೆ.ಜಿ.ಯಷ್ಟು  ಗಾಂಜಾ ವಶಪಡಿಸಿಕೊಂಡಿದ್ದು, ಜಾಲ‌‌ದ ಬಗ್ಗೆ ಕೆಲ ಸುಳಿವು ದೊರಕಿವೆ ಎಂದರು.

ಈ ಜಾಲದಲ್ಲಿ ವಿದೇಶಿಗರ ಪಾತ್ರ ಇರುವುದು ಖಾತರಿಯಾಗಿದೆ. ಮುಂದಿನ ದಿನಗಳಲ್ಲಿ ದೊಡ್ಡ  ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿ, ಮಾದಕ ಜಾಲವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ  ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಸ್ಯಾಂಡಲ್ವುಡ್ ಕೆಲ ನಟ-ನಟಿಯರು ಡ್ರಗ್ಸ್ ಬಳಸುತ್ತಿದ್ದಾರೆ ಎಂದು ನಟ, ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಆರೋಪಿಸಿದ್ದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. 

Leave a Reply

Your email address will not be published. Required fields are marked *

error: Content is protected !!