ಕಾರ್ಕಳ: ಜೀವನದಲ್ಲಿ ಜಿಗುಪ್ಸೆ ವ್ಯಕ್ತಿಗಳಿಬ್ಬರ ಆತ್ಮಹತ್ಯೆ
ಕಾರ್ಕಳ ಸೆ.26(ಉಡುಪಿ ಟೈಮ್ಸ್ ವರದಿ): ವಿಪರೀತ ಮದ್ಯಸೇವನೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.
ಕಾರ್ಕಳದ ಅಜೆಕಾರಿನ ಕೇಶವ ನಾಯಕ್(65), ಕಸಬಾ ಗ್ರಾಮದ ನಾರಾಯಣ ದೇವಾಡಿಗ (63) ಆತ್ಮಹತ್ಯೆ ಮಾಡಿಕೊಂಡವರು.
ಇವರಿಬ್ಬರು ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸವನ್ನು ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ ನಾರಾಯಣ ದೇವಾಡಿಗ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಅಜೆಕಾರು ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.