49 ಸಿಬ್ಬಂದಿಗಳಿಗೆ ಕೊರೋನಾ ಸೋಂಕು: ನೋಕಿಯಾ ಫೋನ್ ತಯಾರಿಕಾ ಘಟಕ ಸ್ಥಗಿತ!
ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.
ಕಳೆದ ವಾರ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.
ಈ ಘಟಕದಲ್ಲಿ ಎಷ್ಟು ಜನರಿಗೆ ಸೋಂಕು ಹರಡಿದೆ ಎಂಬುದನ್ನು ಕಂಪನಿ ತಿಳಿಸಿಲ್ಲ. ಆದರೆ 49 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕಂಪನಿಯ ಬಲ್ಲ ಮೂಲಗಳು ತಿಳಿಸಿವೆ.ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲಿ ಮತ್ತೆ ಕಾರ್ಯಾರಂಭ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.
ಕಳೆದ ವಾರ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಕಂಪನಿ ಕೂಡ ನೌಕರರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.