ಬ್ರಹ್ಮಾವರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ ಸೆ.28(ಉಡುಪಿ ಟೈಮ್ಸ್ ವರದಿ): ತಮಗಿದ್ದ ಗಂಟಲು ಕ್ಯಾನ್ಸರ್ ಕಾಯಿಲೆಯಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಕಚ್ಚೂರು ಗ್ರಾಮದಲ್ಲಿ ನಡೆದಿದೆ.  

ಸ್ಥಳೀಯ ನಿವಾಸಿ ಶಿವಪ್ಪ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡವರು.

ಶಿವಪ್ಪ ನಾಯ್ಕ ಅವರು ಮೂರು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಜೀವನದಲ್ಲಿ ಜೀಗುಪ್ಸೆಗೊಂಡು ನಿನ್ನೆ ಮಧ್ಯಾಹ್ನದ ಅವಧಿಯಲ್ಲಿ ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಸುಮಿತ್ರ ಎಂಬವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!