ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ- 3 ಮಂದಿ ವಶಕ್ಕೆ

ಮಣಿಪಾಲ ಸೆ.28(ಉಡುಪಿ ಟೈಮ್ಸ್ ವರದಿ):ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ 3ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಣಿಪಾಲಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆರಿಯನ್ ಅಬ್ರಾಹಂ (21), ಜೊಯಲ್ ಜಾನ್ಸನ್ (21), ಮ್ಯಾಥಿವ್ ಕ ಬೇಬಿ (21) ಪೊಲೀಸರು ವಶಕ್ಕೆ ಪಡೆದ ಯುವಕರು.

ಮಣೀಪಾಲ ಠಾಣಾ ಪೊಲೀಸರು, ಮಣಿಪಾಲದ ಶೀಂಬ್ರಾ ಸೇತುವೆ ಬಳಿ ಕರ್ತವ್ಯದಲ್ಲಿ ಇದ್ದ ವೇಳೆ ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದಂತೆ ಕಂಡು ಬಂದ ಚೆರಿಯನ್ ಅಬ್ರಾಹಂ, ಜೊಯಲ್ ಜಾನ್ಸನ್, ಮ್ಯಾಥಿವ್ ಕ ಬೇಬಿ, ಎಂಬ ಮೂವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!