ನಳಿನ್‌ ಕುಮಾರ್‌ ಕಟೀಲ್‌ಗೆ ಕೋವಿಡ್‌ ಪಾಸಿಟಿವ್‌

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನಾನು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!