ಪ್ರವೀಣ್‌ ನೆಟ್ಟಾರು ಪತ್ನಿಗೆ ‘ಸಿ’ ದರ್ಜೆಯ ಗುತ್ತಿಗೆ ನೌಕರಿ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ ನೀಡಿ ಆದೇಶ ಹೊರಡಿಸಲಾಗಿದೆ.

ಪ್ರವೀಣ್‌ ಪತ್ನಿ ನೂತನ ಕುಮಾರಿಗೆ ತಮ್ಮ ಸಚಿವಾಲಯದಲ್ಲಿ ನೌಕರಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ. 10 ರಂದು ಜನಸ್ಪಂದನಾ ಸಮಾವೇಶದಲ್ಲಿ ಘೋಷಿಸಿದ್ದರು. ಅದರಂತೆಯೇ, ನೂತನಕುಮಾರಿ ಅವರಿಗೆ ಉದ್ಯೋಗ ನೀಡಲಾಗಿದೆ.‌

ಗುತ್ತಿಗೆ ಆಧಾರದಲ್ಲಿ ಸಹಾಯಕ ಹುದ್ದೆ ನೀಡಿದ್ದು, ರೂ.30,350 ವೇತನ ನಿಗದಿಪಡಿಸಲಾಗಿದೆ. ಅವರ ಅಂಕಪಟ್ಟಿ ಮತ್ತು ಇತರ ಶೈಕ್ಷಣಿಕ ದಾಖಲೆಗಳ ನೈಜತೆ ಪರಿಶೀಲನೆಯನ್ನು ಸಂಬಂಧಿಸಿದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳ ಮೂಲಕ ಎರಡು ತಿಂಗಳೊಳಗೆ ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!