ಮುಂಬೈ: ಹೋಟೆಲ್’ನಲ್ಲಿ ನೇಣಿಗೆ ಶರಣಾದ ರೂಪದರ್ಶಿ
ಮುಂಬೈ: ಇಲ್ಲಿನ ಅಂಧೇರಿಯ ಹೋಟೆಲ್ ವೊಂದರ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ರೂಪದರ್ಶಿಯೊಬ್ಬರ ಶವ ಪತ್ತೆಯಾಗಿದೆ.
ಮೃತ ಮಹಿಳೆ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಟೇಲ್ನಲ್ಲಿ ರಾತ್ರಿ ಊಟಕ್ಕೆ ಆರ್ಡರ್ ಮಾಡಿದ್ದರು.
ಗುರುವಾರ ಬೆಳಿಗ್ಗೆ ಸ್ವಚ್ಛತಾ ಸಿಬ್ಬಂದಿ ಪದೇ ಪದೇ ಕರೆ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೊಟೇಲ್ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ರೂಪದರ್ಶಿ ಶವ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನನ್ನನ್ನು ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಸಂತೋಷವಾಗಿಲ್ಲ. ನನಗೆ ಶಾಂತಿ ಬೇಕು ಎಂದು ಡೆತ್ನೋಟ್ನಲ್ಲಿ ರೂಪದರ್ಶಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.