ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ: ಸ್ವಾಗತಿಸಿದ ಸಿದ್ದರಾಮಯ್ಯ
ಗುಂಡ್ಲುಪೇಟೆ, ಸೆ.30: ‘ಭಾರತ್ ಜೋಡೋ ಯಾತ್ರೆ’ ಯ ಸಲುವಾಗಿ ಇಂದು ರಾಜ್ಯ ಪ್ರವೇಶಿಸಿದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಈ ವೇಳೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.