ಮಂಗಳೂರು: 2ನೇ ಬಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ

ಮಂಗಳೂರು, ಸೆ.30: ನಗರದ ಮಿನಿ ವಿಧಾನ ಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಸಹಾಯಕನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಸಹಾಯಕ ಶಿವಾನಂದ ನಾಟೇಕ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಜಾಗದ ಮಾರಾಟ ಸಲುವಾಗಿ ಎನ್.ಓ.ಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಶಿವಾನಂದ ನಾಟೇಕ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಕೊನೆಗೆ ರೂ.5ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ ಇಂದು ಮಧ್ಯಾಹ್ನ 4,700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು. ಹಾಗೂ ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತುಗೊಂಡಿದ್ದು, ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!