ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ- ಶೋಭಾ ಕರಂದ್ಲಾಜೆ ಗರಂ

ಉಡುಪಿ ಸೆ.30: ತಮ್ಮ ಹೆಸರನ್ನು ಬದಲಿಸಲಿದ್ದಾರೆ ಎಂಬ ಸುದ್ದಿಗೆ ಗರಂ ಆದ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ಅವರು “ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ. ಹಾಗೂ ಈ ರೀತಿ ಮಾಡುವವರಿಗೆ ನನ್ನ ವಿನಮ್ರ ವಿನಂತಿ, ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!