ಉಡುಪಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಪದವಿ ಪ್ರದಾನ

ಉಡುಪಿ ಅ.1(ಉಡುಪಿ ಟೈಮ್ಸ್ ವರದಿ): ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ “ವಿಶಿಖಾನುಪ್ರವೇಶ” ಪದವಿ ಪ್ರದಾನ ಸಮಾರಂಭವು ಕಾಲೇಜಿನ ಭಾವಪ್ರಕಾಶ ಸಂಭಾಗಣದಲ್ಲಿ ಸೆ.30 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಧಾರವಾಡದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಡಾ.ಎಸ್.ಕೆ.ಜೋಶಿ ಅವರು, ಆಯುರ್ವೇದದ ಮಹತ್ವವನ್ನು ತಿಳಿಸುತ್ತಾ ಆಯುರ್ವೇದ ಪದ್ಧತಿಯನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ಒತ್ತಿ ಹೇಳಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಮತಾ ಕೆ.ವಿ.ಯವರು ಅತಿಥಿಗಳನ್ನು ಸ್ವಾಗತಿಸಿ, ತಮ್ಮ ಸ್ವಾಗತ ಭಾಷಣದಲ್ಲಿಕಾಲೇಜು, ಆಸ್ಪತ್ರೆ, ಸಂಶೋಧನಾಕೇಂದ್ರ ಹಾಗೂ ಔಷಧ ತಯಾರಿಕಾ ಘಟಕವನ್ನು ಹೊಂದಿರುವ ಈ ಸಂಸ್ಥೆಯು ಭಾರತದ ಏಕೈಕ ಆಯುರ್ವೇದ ಮಹಾವಿದ್ಯಾಲಯವಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಳ್ಳಬಹುದೆಂದು ತಿಳಿಸಿದರು.

ಮೆಡಿಕಲ್ ಅಸೆಸ್ ಮೆಂಟ್ ಎಂಡ್ ರೇಟಿಂಗ್ ಬೋರ್ಡ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ (ಎನ್.ಸಿ.ಐ.ಎಸ್.ಎಮ್) ನವದೆಹಲಿ ಇದರ ಅಧ್ಯಕ್ಷರಾದ ಡಾ.ರಘುರಾಮ್ ಭಟ್ಟ ಯು. ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್.ಡಿ.ಎಮ್.ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ ಬೆಂಗಳೂರು ಇದರ ಪ್ರಾಂಶುಪಾಲರಾದ ಡಾ.ಜಗದೀಶ್ ಕುಂಜಾಲ್ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸ್ನಾತಕ ವಿದ್ಯಾರ್ಥಿನಿ ಡಾ.ಶುಭಾ ಎಸ್ ಭಟ್ ಉತ್ತಮ ಫಲಿತಾಂಶಕ್ಕಾಗಿ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು. ಹಾಗೂ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್‍ರವರು 71 ಸ್ನಾತಕ ಮತ್ತು 31 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಇದೇ ವೇಳೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿ.ವಿ. ಕುಲಪತಿಡಾ. ಡಿ.ವಿರೇಂದ್ರ ಹೆಗ್ಗಡೆ ಯವರು ಪದವಿ ಪಡೆದು ಕಾಲೇಜಿಗೆ ಪ್ರಶಸ್ತಿಗಳನ್ನು ತಂದು ಸಾಧನೆಯನ್ನು ಮಾಡಿದ ಎಲ್ಲಾ ವೈದ್ಯರುಗಳಿಗೆ ತಮ್ಮ ಅನ್ ಲೈನ್ ಸಂದೇಶದ ಮೂಲಕ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ವೀರಕುಮಾರ ಕೆ., ಸ್ನಾತಕೋತ್ತರ ವಿಭಾಗದ ಸಹಾಯಕ ಡೀನ್ ಡಾ.ಸುಚೇತ ಕುಮಾರಿ ಎಮ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ದೀಪಕ್ ಎಸ್.ಎಮ್, ಸಹಾಯಕ ಪ್ರಾಧ್ಯಾಪಕರಾದ ಡಾ. ರಾಕೇಶ್ ಆರ್.ಎನ್., ಡಾ.ಸಂದೇಶ್ ಕುಮಾರ್ ಶೆಟ್ಟಿ ಮತ್ತು ಡಾ. ಲಿಖಿತ ಡಿ.ಎನ್. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!