ಸೈಬರ್ ಅಪರಾಧ- ದೇಶದಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ದೇಶದಾದ್ಯಂತ ಮಂಗಳವಾರ ಸಿಬಿಐ ಅಧಿಕಾರಿಗಳು 105 ಸ್ಥಳಗಳಲ್ಲಿ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ಶೋಧ ನಡೆಸಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನೂರಾರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಗೆ ‘ಆಪರೇಷನ್ ಚಕ್ರ‘ ಎಂದು ಹೆಸರಿಡಲಾಗಿದೆ.  

ಒಟ್ಟು 87 ಸ್ಥಳಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ರಾಜ್ಯದಲ್ಲಿ ಎರಡು ಕಡೆ ಶೋಧ ಮಾಡಲಾಗಿದೆ ಎಂದು ವರದಿಯಾಗಿದೆ.

ಚಿನ್ನ, ರೂ.2 ಕೋಟಿ ನಗದು ಸೇರಿದಂತೆ ಡಿಜಿಟಲ್‌ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. 

ಪ್ರಾಥಮಿಕ ಮಾಹಿತಿ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ , ದೆಹಲಿ, ಚಂಡೀಗಢ, ಪಂಜಾಬ್, ಗುಜರಾತ್‌, ಕರ್ನಾಟಕ ಮತ್ತು ಅಸ್ಸಾಂನಲ್ಲಿ ಕಾರ್ಯಾಚರಣೆ  ನಡೆಸಲಾಗಿದೆ.

ವಿವಿಧ ಕಾಲ್‌ಸೆಂಟರ್‌ಗಳು, ಆನ್‌ಲೈನ್‌ ಕೆಫೆಗಳ ಮೇಲೆ ದಾಳಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!