ಗಾಯಾಳುಗಳ ಆಸ್ಪತ್ರೆಗೆ ದಾಖಲಿಸುತ್ತಿದ್ದ ವೇಳೆ ಕಾರು ಡಿಕ್ಕಿ- 5 ಮೃತ್ಯು, 12ಮಂದಿಗೆ ಗಾಯ

ಮುಂಬೈ ಅ.5: ಇಲ್ಲಿನ ಬಾಂದ್ರಾ-ವರ್ಲಿ ಸೇತುವೆಯಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಿದ್ದತೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು ಅಪಘಾತವಾಗಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 12 ಮಂದಿ ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ಇಂದು ಮುಂಜಾನೆ ನಸುಕಿನ ವೇಳೆ 3.30ರ ಸುಮಾರಿಗೆ ಬಾಂದ್ರಾ-ವರ್ಲಿ ಸೇತುವೆಯ ರಸ್ತೆ ಬದಿಯಲ್ಲಿ ಅಪಘಾತವೊಂದು ಸಂಭವಿಸಿತ್ತು. ಅಪಘಾತಕ್ಕಿಡಾದ ಜನರನ್ನು ಸಾಗಿಸಲು ಆಂಬುಲೆನ್ಸ್ ಮತ್ತು ಇತರ ವಾಹನಗಳು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗ ವೇಗವಾಗಿ ಬಂದ ಮತ್ತೊಂದು ಕಾರು ಅಪಘಾತದ ನಡೆದ ಸ್ಥಳದಲ್ಲಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!