ಸೆ. 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ.


ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ. 

ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲಾಗುತ್ತಿದೆ. ಈ ವಿಮಾನಗಳ ಹಾರಾಟಕ್ಕೆ ಅನುಮತಿ ಇದೆ.

Leave a Reply

Your email address will not be published. Required fields are marked *

error: Content is protected !!