ಮಾಜಿ ರಾಷ್ಟ್ರಪತಿ, ಖ್ಯಾತ ಆರ್ಥಿಕ ತಜ್ಞ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (85) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರಣಬ್ ಮುಖರ್ಜಿ ಅವರು ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ಮುಖರ್ಜಿ ಅವರು ಟ್ವೀಟ್ ಮಾಡಿ ವಿಷಯ ಹಂಚಿಕೊಂಡು, ತನ್ನ ಸಂಪರ್ಕಕ್ಕೆ ಬಂದವರು ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು.

ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ಭಾರೀ ಪ್ರಮಾಣದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಲ್ಲದೇ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ನಿಗಾವಹಿಸಲಾಗಿತ್ತು ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

error: Content is protected !!