ಉಡುಪಿ- ದ.ಕ. ಸಹಿತ 16 ಜಿಲ್ಲೆಗೆ ಸೆ.4 ವರೆಗೆ ‘ಯೆಲ್ಲೊ ಅಲರ್ಟ್’
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.1ರಿಂದ 4ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಇದ್ದು ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.