ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲವಾರ್ ದಾಳಿಗೆ ಯತ್ನ

ಬಂಟ್ವಾಳ ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ತಲವಾರ್ ದಾಳಿಗೆ ಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಸುಮಾರು 11.30 ರ ವೇಳೆ ಶಾಸಕ ಹರೀಶ್ ಪೂಂಜಾ ಅವರು  ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್‌ ನಲ್ಲಿ ಬಂದ ಅಪರಿಚಿತರ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ. ಹಾಗೂ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು. ಶಾಸಕರ ಅಧಿಕೃತ ಕಾರು  ಆ ಕಾರನ್ನು ಹಿಂಬಾಲಿಸುತ್ತಿತ್ತು. ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. 

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!