ಚೆನ್ನೈ-ಬೆಂಗಳೂರು-ಮೈಸೂರು: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನ.10ಕ್ಕೆ ಪ್ರಧಾನಿ ಉದ್ಘಾಟನೆ
ನವದೆಹಲಿ: ನವೆಂಬರ್ 10ರಂದು ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುತ್ತಿದ್ದು ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ.
ದೆಹಲಿ–ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಸರಣಿಯ 4ನೇ ರೈಲಿಗೆ ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಚಾಲನೆ ನೀಡಿದ್ದರು. ಇದೀಗ ನಂವೆಂಬರ್ 10ರಂದು ವಂದೇ ಭಾರತ್ ಎಕ್ಸ್‌ಪ್ರೆಸ್ ನ 5ನೇ ರೈಲಿಗೆ ಚಾಲನೆ ಸಿಗಲಿದೆ.
ರಾಜ್ಯದ ಮೊದಲ ವಂದೇ ಭಾರತ್ ರೈಲು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ಸಂಚರಿಸಲಿದೆ. ಇದಕ್ಕೆ ನನ್ನ ಪ್ರೀತಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದ್ದಾರೆ.
ಚೆನ್ನೈನಿಂದ ಮೈಸೂರಿಗೆ ಬೆಂಗಳೂರು ಮಾರ್ಗವಾಗಿ ತೆರಳಲಿರುವ ರೈಲು ನವೆಂಬರ್ 5ರಂದು ಟ್ರಯಲ್ ರನ್‌ಗಾಗಿ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ ತೆರಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ರಾಜ್ಯಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಗಿಫ್ಟ್ ಸಿಕ್ಕಿದೆ.