ಬೆಳ್ತಂಗಡಿ ಶಾಸಕ ಪೂಂಜಾ ಕಾರು ಅಡ್ಡಗಟ್ಟಿದ ಪ್ರಕರಣ- ಓರ್ವ ವಶಕ್ಕೆ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಕಾರು ಅಡ್ದಗಟ್ಟಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಪಳ್ನೀರು ನಿವಾಸಿ ರಿಯಾಜ್(38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶಾಸಕರ ಕಾರನ್ನು ಹಿಂಬಾಲಿಸಿಕೊಂಡು ಬಂದ ಸ್ಕಾರ್ಫಿಯೋ ವಾಹನವನ್ನು ಕೂಡ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ದ ಈವರೆಗೆ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ. ಹಾಗೂ ವಾಹನದಲ್ಲಿ ಯಾವುದೇ ಮಾರಕಾಯುಧಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಘಟನೆ ನಡೆದಿರುವ ಸಾಧ್ಯತೆ ಬಗ್ಗೆ ಅವರು ಸಂಶಯ ವ್ಯಕ್ತಪಡಿಸಿದ್ದು ಪೂರ್ಣ ತನಿಖೆಯ ಬಳಿಕ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು.