ಸುರತ್ಕಲ್: ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ- ಸರಕಾರದ ವಿರುದ್ಧ ಆಕ್ರೋಶ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿದ್ದು ಸಾರ್ವಜನಿಕರು ಸರಕಾರದ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್ ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಡಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ಹೇಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ “ಗಂಡಸು” ಪೊಲೀಸರ ದಂಡು !! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ ಬಿಜೆಪಿಗರೆ ಎಚ್ಚರ” ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!