ಕಾನೂನು ಬಾಹಿರವಾಗಿ ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಪ್ರಕರಣದ ಎಚ್ಚರಿಕೆ

ಹಾವೇರಿ, ಅ.18: ಕಾನೂನು ಬಾಹಿರವಾಗಿ ಕಾರ್ಮಿಕರ ಕಾರ್ಡ್ ಗಳನ್ನು ಪಡೆಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕಾರ್ಮಿಕ ಇಲಾಖೆ ನೀಡಿದೆ.

ಈ ಬಗ್ಗೆ ರಾಣೇಬೆನ್ನೂರಿನಲ್ಲಿ ರಾಜ್ಯ ವಿಮಾ ಚಿಕಿತ್ಸಾಲಯ (ಇಎಸ್‍ಐ) ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ಅವರು, ಕಾನೂನು ಬಾಹಿರವಾಗಿ ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ಹಾಗೂ  ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ದೇಶದಲ್ಲೇ ರಾಜ್ಯದ ಕಾರ್ಮಿಕ ಇಲಾಖೆ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದ ಅವರು, ಎರಡು ವರ್ಷಗಳಲ್ಲಿ ರಾಜ್ಯದ ಕಾರ್ಮಿಕರ ಮಕ್ಕಳಿಗೆ 845 ಕೋಟಿ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 500 ಕಾರ್ಮಿಕರ ಮಕ್ಕಳನ್ನು ಕೆಎಎಸ್ ಹಾಗೂ 250 ಕಾರ್ಮಿಕರ ಮಕ್ಕಳನ್ನು ಐಎಎಸ್ ತರಬೇತಿಗೆ ನಿಯೋಜಿಸಲಾಗಿದೆ. ಅಲ್ಲದೆ

ಕಾರ್ಮಿಕರ ಮಕ್ಕಳಿಗೆ ವಿದೇಶದಲ್ಲಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಸಂಪೂರ್ಣ ವೆಚ್ಚವನ್ನು ಸರಕಾರಿ ಭರಿಸಲಿದೆ. ಇದರ ಜೊತೆಗೆ ರಾಜ್ಯದ 35 ಕಾರ್ಮಿಕರ ಮಕ್ಕಳಿಗೆ 35 ಲಕ್ಷ ವೆಚ್ಚದಲ್ಲಿ ಪೈಲೆಟ್ ತರಬೇತಿ ನೀಡಲಾಗುವುದು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!