ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ  ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ  ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು.

ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು. 

ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ ಶರೀರವನ್ನು  ಸಾರ್ವಜನಿಕರ ದರ್ಶನಕ್ಕೆಇಡಲಾಗಿತ್ತು.ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ  ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ  ಆರು ಅಡಿ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಕಡ್ಡಾಯಪಡಿಸಲಾಗಿತ್ತು.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಆರ್ ಆರ್ ಸೇನಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.ಗಂಭೀರ ಸ್ಥಿತಿಯಲ್ಲಿ ಮುಖರ್ಜಿ ಅವರನ್ನು ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ತುರ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಲ್ಲದೆ ಕೋವಿಡ್ ಸೋಂಕಿಗೂ ಒಳಗಾಗಿದ್ದರು.

Leave a Reply

Your email address will not be published. Required fields are marked *

error: Content is protected !!