ಉಡುಪಿ: ಬಾವಿಗೆ ಹಾರಿ ಕುಂಜಿಬೆಟ್ಟಿನ ಮಹಿಳೆ ಆತ್ಮಹತ್ಯೆ

ಮಣಿಪಾಲ ಅ.25(ಉಡುಪಿ ಟೈಮ್ಸ್ ವರದಿ): ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನಲ್ಲಿ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಲಿಲ್ಲಿ ಡಿಸೋಜಾ (70) ಆತ್ಮಹತ್ಯೆ ಮಾಡಿಕೊಂಡವರು. 

ಇವರ ಸುಮಾರು 2 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು.  ಅಲ್ಲದೆ ಸುಮಾರು 6 ತಿಂಗಳ ಹಿಂದೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು. ಈ ನಡುವೆ ಅ.24 ರಂದು ರಾತ್ರಿ ಮನೆಯಲ್ಲೇ ಇದ್ದ ಅವರು ಅ.25ರಂದು ಬೆಳಿಗ್ಗೆ ಮನೆಯಲ್ಲಿ ಕಾಣದೆ ಇದ್ದು ಸುತ್ತ ಮುತ್ತ ಹುಡುಕಾಡಿದಾಗ ಪತ್ತೆಯಾಗಿರಲಿಲ್ಲ. ಬಳಿಕ ತಮ್ಮ ಮನೆಯ ಸಮೀಪ ಇರುವ ಬಾವಿಯಲ್ಲಿ ನೋಡಿದಾಗ ಲಿಲ್ಲಿ ಡಿಸೋಜಾ ಅವರ ಮೃತದೇಹ ನೀರಿನಲ್ಲಿ ಪತ್ತೆಯಾಗಿದೆ.

ಅದರಂತೆ ಲಿಲ್ಲಿ ಡಿಸೋಜಾ ಅವರು ತನಗಿದ್ದಮಾನಸಿಕ ಖಾಯಿಲೆಯಿಂದಲೋ ಅಥವಾ ಇನ್ಯಾವುದೋ ಕಾರಣದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಮಗ ರಾಬರ್ಟ್ ಡಿಸೋಜಾ ಎಂಬವರು ನೀಡಿದ ಮಾಹಿತಿಯಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080- 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!