ಉಡುಪಿ: ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಪ್ರಸಾದ್ ನೇತ್ರಾಲಯಕ್ಕೆ ಭೇಟಿ
ಉಡುಪಿ ಅ.25(ಉಡುಪಿ ಟೈಮ್ಸ್ ವರದಿ): ಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಬಂದರು ಹಾಗೂ ಜಲಮಾರ್ಗ ರಾಜ್ಯ ಸಚಿವ ಶ್ರೀಪಾದ ನಾಯಕ್ ರವರು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದರು.
ಆಸ್ಪತ್ರೆಗೆ ಭೇಟಿ ನೀಡಿದ ಸಚಿವರನ್ನು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಆಸ್ಪತ್ರೆಯ ನಿರ್ದೆಶಕಿ ರಶ್ಮಿ ಕೃಷ್ಣಪ್ರಸಾದ್ ರವರು ಉಪಸ್ಥಿತರಿದ್ದರು.