ಉಡುಪಿ: ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಪ್ರಸಾದ್ ನೇತ್ರಾಲಯಕ್ಕೆ ಭೇಟಿ

ಉಡುಪಿ ಅ.25(ಉಡುಪಿ ಟೈಮ್ಸ್ ವರದಿ): ಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಬಂದರು ಹಾಗೂ ಜಲಮಾರ್ಗ ರಾಜ್ಯ ಸಚಿವ ಶ್ರೀಪಾದ ನಾಯಕ್‌ ರವರು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದರು. 

ಆಸ್ಪತ್ರೆಗೆ ಭೇಟಿ ನೀಡಿದ ಸಚಿವರನ್ನು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ  ಮಹೇಶ್ ಠಾಕೂರ್, ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಆಸ್ಪತ್ರೆಯ ನಿರ್ದೆಶಕಿ ರಶ್ಮಿ ಕೃಷ್ಣಪ್ರಸಾದ್‌ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!