ಉದ್ಯಾವರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಕಾಪು ಅ.27(ಉಡುಪಿ ಟೈಮ್ಸ್ ವರದಿ): ಉದ್ಯಾವರದ ಬೋಳಾರಗುಡ್ಡೆ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಂದ್ರಶೇಖರ (65) ಆತ್ಮಹತ್ಯೆ ಮಾಡಿಕೊಂಡವರು.

ಇವರಿಗೆ 40 ವರ್ಷಗಳಿಂದ ಮದ್ಯಪಾನ ಸೇವನೆ ಮಾಡುವ ಅಭ್ಯಾಸವಿದ್ದು, ಅವರು 4 ತಿಂಗಳುಗಳ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಇದೇ ಕಾರಣದಿಂದ ವೈದ್ಯರ ಸಲಹೆಯಂತೆ ಚಂದ್ರಶೇಖರ ಅವರಿಗೆ ಮದ್ಯಪಾನವನ್ನು ನೀಡದೆ ಇದ್ದು, ಇದೇ ಕಾರಣದಿಂದ ತಂದೆಯವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅ.26 ರಂದು ಮಧ್ಯಾಹ್ನದ ವೇಳೆ ಉದ್ಯಾವರ ಗ್ರಾಮದ ಬೋಳಾರಗುಡ್ಡೆ ಗಣೇಶ ನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾಫು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!