ಸುರತ್ಕಲ್ ಬಂಟರ ಸಂಘ: ಮಹಿಳಾ ವೇದಿಕೆಯಿಂದ ದೀಪಾವಳಿ ಆಚರಣೆ
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.
ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ ಕೊಳ್ಳುವುದು ಅಗತ್ಯ ಎಂದು ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜೆ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯೆ ಮಾಲತಿ ಜೆ ಶೆಟ್ಟಿ, ಮಹಿಳಾ ವೇದಿಕೆಯ ಮಾಜೀ ಅಧ್ಯೆಕ್ಷರಾದ ಚಂದ್ರಕಲಾ ಶೆಟ್ಟಿ, ಬೇಬಿ ಶೆಟ್ಟಿ, ಮಾಜೀ ಉಪಾಧ್ಯೆಕ್ಷೆ ಸುಜಾತ ಶೆಟ್ಟಿ ಹೊಸಬೆಟ್ಟು, ಮಾಜೀ ಕಾರ್ಯದರ್ಶಿ ವೀಣಾ ಶೆಟ್ಟಿ ಹಾಗೂ ಮಹಿಳಾ ಸದಸ್ಯೆಯರು ಉಪಸ್ಥಿತರಿದ್ದರು.