ಬೆಳ್ಮಣ್: ಕಾರು ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ಮಣ್: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಮಧ್ಯಾಹ್ನ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ.
ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಮೃತ ದುರ್ದೈವಿ. ಇವರು ಇಂದು ಸಂಬಂಧಿಕರ ಸಮಾರಂಭವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಜಾರ್ಜ್ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಇದರಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ಜಾರ್ಜ್ ಅವರ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತ ಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದರೆ.