ಮುನಿಯಾಲು: ಅ.30 ರಂದು ‘ಗೋಧಾಮ’ ದೇಸಿ ಗೋವುಗಳ ಹಾಲಿನ ಉತ್ಪನ್ನಗಳ ಬಿಡುಗಡೆ
ಮುನಿಯಾಲು: ದೇಶೀಯ ಗೋತಳಿಗಳ ಅಭಿವೃದ್ಧಿ ಕೇಂದ್ರ ಸಂಜೀವಿನಿ ಫಾರ್ಮ್ ಮತ್ತು ಡೈರಿಯ ಮುನಿಯಾಲು ಗೋಧಾಮದಲ್ಲಿ ದೇಸಿ ಗೋವುಗಳ ಹಾಲಿನ ಉತ್ಪನ್ನಗಳ ಬಿಡುಗಡೆ ಸಮಾರಂಭ ಅ. 30 ರಂದು 3 ಗಂಟೆಯಿಂದ ನಡೆಯಲಿದೆ. ನಾಮ ಸಂಕೀರ್ತನೆ, ಗೋಪೂಜೆ ಹಾಗೂ ಉತ್ಪನ್ನಗಳ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಮುನಿಯಾಲು ಗೋಧಾಮದ ಸಂಸ್ಥಾಪಕ ಜಿ.ರಾಮಕೃಷ್ಣ ಆಚಾರ್ ತಿಳಿಸಿದ್ದಾರೆ.
ಮೂಡಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕರು ಮತ್ತು ಸಿ.ಇ.ಒ ಎಮ್.ಎಸ್. ಮಹಾಬಲೇಶ್ವರ, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್. ಯಡಪಡಿತ್ತಾಯ, ಬೋಳ ಸುರೇಂದ್ರ ಕಾಮತ್ & ಸನ್ಸ್ ಉಧ್ಯಮ ಸಮೂಹದ ವ್ಯವಸ್ಥಾಪಕ ಪಾಲುದಾರ ಬೋಳ ದಾಮೋದರ್ ಕಾಮತ್, ಮಂಗಳೂರು ಕ್ಯಾಂಪ್ಕೊ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಮಂಗಳೂರಿನ ಲೆಕ್ಕ ಪರಿಶೋಧಕ ಎಸ್.ಎಸ್. ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ತುಳು ಹಾಗೂ ಕನ್ನಡ ಚಿತ್ರನಟರಾದ ದೀಪಕ್ ರೈ ಪಾಣಾಜೆಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಾರ್ಕೂರಿನ ಉದ್ಯಮಿ ಶ್ರೀನಿವಾಸ ಶೆಟ್ಟಿಗಾರ್ ದಂಪತಿಗಳು ಗೋಪೂಜನವನ್ನು ನೆರವೇರಿಸುವರು ಎಂದು ಜಿ. ರಾಮಕೃಷ್ಣ ಆಚಾರ್ ತಿಳಿಸಿದ್ದಾರೆ.