ಉಡುಪಿ: ನಗರ ಸಭಾ ಸದಸ್ಯೆ ಸೆಲಿನಾ ಕರ್ಕಡ ನಿಧನ
ಉಡುಪಿ: ಉಡುಪಿ ನಗರಸಭೆಯ ಪೆರಂಪಳ್ಳಿ ವಾರ್ಡಿನ ಕಾಂಗ್ರೆಸ್ ನ ಸದಸ್ಯೆ ಸೆಲಿನಾ ಕರ್ಕಡ ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಎರಡನೇ ಬಾರಿ ಪೆರಂಪಳ್ಳಿ ವಾರ್ಡಿನ ನಗರ ಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದ ಸೆಲಿನಾ ಕರ್ಕಾಡ(52) ಅವರು ಕರುಳಿನ ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯಿಂದ ತೀವ್ರ ಅಸ್ವಸ್ಥರಾಗಿದ್ದ ಇವರು ಕಳೆದ ಬುಧವಾರ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಶನಿವಾರ ರಾತ್ರಿ 11.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೃತರು ಪತಿ, ಓರ್ವ ಪುತ್ರ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಉಡುಪಿ ನಗರಸಭೆಯ ಓರ್ವ ಸದಸ್ಯೆಯಾಗಿ ದ್ದು,ಸದಾ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿದ್ದ ದಿಟ್ಟ ಮಹಿಳೆಯಾಗಿದ್ದ ಸೆಲಿನ್ ಕರ್ಕಡ ಅವರ ನಿಧನ ನಮಗೆಲ್ಲರಿಗೂ ಅದರಲ್ಲೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ ದೊಡ್ಡ ನಷ್ಟವನ್ನುಂಟು ಮಾಡಿದೆ.ಸದಾ ಹಸನ್ಮುಖಿಯಾಗಿ,ಸ್ನೇಹಜೀವಿ ಯಾಗಿ ನಮ್ಮೊಂದಿಗೆ ಬೆರೆಯುತ್ತಿದ್ದ ಅವರು ಯಾವಾಗಲೂ ನಮ್ಮ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಹವರು. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ,ಅವರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪರವಾಗಿ ಅವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಉಡುಪಿ ನಗರ ಸಭೆಯ ವಿಪಕ್ಷ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್ ಸಂತಾಪ ಸೂಚಿಸಿದ್ದಾರೆ.