ನ.1ರಂದು ಸೌಂದರ್ಯ ವರ್ಧಕ ಮತ್ತು ಆರೋಗ್ಯ ಸಂರಕ್ಷಣಾ ಪ್ರಾತ್ಯಕ್ಷಿಕೆ-ಮಾಹಿತಿ ಶಿಬಿರ
ಉಡುಪಿ ಅ.30(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸೆಲೂನ್ ಹಾಗೂ ಬ್ಯೂಟಿಪಾರ್ಲರ್ ನ್ನು ಆಧುನೀಕರಿಸುವ ನಿಟ್ಟಿನಲ್ಲಿ ಮಾರ್ಕ್ @ ಡೈರೆಕ್ಟ್ ಮತ್ತು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ಜಂಟಿ ಆಶ್ರಯದಲ್ಲಿ ಸೌಂದರ್ಯ ವರ್ಧಕ ಮತ್ತು ಆರೋಗ್ಯ ಸಂರಕ್ಷಣಾ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ನ.1ರಂದು ಸವಿತಾ ಸಮಾಜ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಹಕಾರಿ ಸೌಹಾರ್ದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು,
ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾರ್ಕ್ @ ಡೈರೆಕ್ಟ್ ನ ಅಧ್ಯಕ್ಷ ಡಾ. ರಾಜೇಶ್ ಕೃಷ್ಣ ಆಳ್ವ, ಅಧ್ಯಕ್ಷ ಗೋವಿಂದ ಭಂಡಾರಿ, ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ ಭಂಡಾರಿ ನಿಂಜೂರು, ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಉಪಸ್ಥಿತರಿದ್ದರು.